’ಪದ್ಮಗಂಧಿ’ ಚಿತ್ರದ ಮೂರು ಭಾಷೆಯ ಟ್ರೇಲರ್ ಹಾಗೂ ಹಾಡುಗಳು ರಿಲೀಸ್

 ’ಪದ್ಮಗಂಧಿ’ ಚಿತ್ರದ ಮೂರು ಭಾಷೆಯ ಟ್ರೇಲರ್ ಹಾಗೂ ಹಾಡುಗಳು ರಿಲೀಸ್

ಹಿರಿಯ ನಟ ಕ.ಸುಚೇಂದ್ರ ಪ್ರಸಾದ ಚಿತ್ರಕಥೆ-ಸಂಭಾಷಣೆ ಜತೆಗೆ ನಿರ್ದೇಶನ ಮಾಡಿರುವ ’ಪದ್ಮಗಂಧಿ’ ಚಿತ್ರದ ಕನ್ನಡ, ಸಂಸ್ಕ್ರತ ಮತ್ತು ಹಿಂದಿ ಭಾಷೆಯ ಟ್ರೇಲರ್ ಹಾಗೂ ಹಾಡುಗಳನ್ನು ಇತ್ತೀಚೆಗಷ್ಟೆ ಅನಾವರಣ ಮಾಡಲಾಯಿತು. ಮಾಜಿ ಎಂಎಲ್‌ಸಿ, ಅಂಕಣಕಾರ್ತಿ, ಸಂಸ್ಕ್ರತ ಭೂಮಿಕೆಯಲ್ಲಿ ನಾನಾ ದಿಕ್ಕಿನಲ್ಲಿ ಅಧ್ಯಯನ ನಡೆಸಿರುವ ನಿವೃತ ಪ್ರೊಫೆಸರ್ ಎಸ್.ಆರ್.ಲೀಲಾ ರಚಸಿ, ನಿರ್ಮಾಣ ಮಾಡಿರುವ ಚಿತ್ರವಿದು.

ಮುಖ್ಯವಾಗಿ ಜಗದ್ಗುರು ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು, ಪೇಜಾವರ ಮಠಾಧೀಶರು “ಸುಚೇಂದ್ರ ಪ್ರಸಾದ್ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆಂದು ಭಾವಿಸಿದ್ದೇನೆ. ಕನ್ನಡ ಚಿತ್ರರಂಗ ಲಾಭದಾಯಕವಲ್ಲದ ಪರಿಸ್ಥಿತಿಯಲ್ಲಿ ಸಿನಿಮಾ ಮಾಡಿದ್ದಾರೆ. ಸಂಸ್ಕ್ರತ ಅನ್ನುವುದು ದೇಶದುದ್ದಕ್ಕೂ ಸಲ್ಲುವ ಭಾಷೆ. ಆದ್ದರಿಂದ ವಿಸ್ತೃತವಾದಂತ ನೋಡುಗರು, ಕೇಳುಗರು ಇರುತ್ತಾರೆ. ಇದರ ಹಿಂದೆ ಕೈ ಜೋಡಿಸಿದ ಎಲ್ಲರಿಗೂ ಶ್ರೇಯಸು ಸಿಗಲೆಂದು” ಶುಭ ನುಡಿಗಳನ್ನು ಹೇಳಿದರು.

ವಿದ್ಯಾರ್ಥಿಯಾಗಿ ಕು.ಮಹಾಪದ್ಮ, ಗುರುಮಾತೆ ಪಾತ್ರದಲ್ಲಿ ಉಡುಪಿಯ ಪರಿಪೂರ್ಣ ಚಂದ್ರಶೇಖರ್ ಇವರೊಂದಿಗೆ ಶತಾವಧಾನಿ ಡಾ.ಆರ್.ಗಣೇಶ್, ಡಾ.ಗೌರಿ ಸುಬ್ರಹ್ಮಣ್ಯ (ಧರ್ಮಾಧಿಕಾರಿಗಳು, ಮುಕ್ತಿನಾಗ ದೇವಸ್ಥಾನ), ಡಾ.ಪ್ರೇಮಾ, ಡಾ.ಹೇಮಂತ್‌ಕುಮಾರ್, ಆಚಾರ್ಯ ಮೃತ್ಯುಂಜಯಶಾಸ್ತ್ರಿ, ಜಿ.ಎಲ್.ಭಟ್(ಶಿಲ್ಪಜ್ಞ), ಮೃತ್ಯುಂಜಯಶಾಸ್ತ್ರಿ, ಪಂಡಿತ ಪ್ರಸನ್ನವೈದ್ಯ, ಡಾ.ದೀಪಕ್‌ಪರಮಶಿವನ್, ಹೇಮಂತಕುಮಾರ.ಜಿ ಬಣ್ಣ ಹಚ್ಚಿದ್ದಾರೆ. ಡಾ.ದೀಪಕ್ ಪರಮಶಿವನ್ ಸಂಗೀತ, ಮನುಯಪ್ಲಾರ್-ನಾಗರಾಜ್ ಅದ್ವಾನಿ-ಗಿರಿಧರ್‌ದಿವಾನ್ ಛಾಯಾಗ್ರಹಣ, ಎನ್.ನಾಗೇಶ್ ನಾರಾಯಣಪ್ಪ ಸಂಕಲನವಿದೆ.

ಈ ಸಂದರ್ಭದಲ್ಲಿ ಕ.ಸುಚೇಂದ್ರಪ್ರಸಾದ ಸಿನಿಮಾ ಹುಟ್ಟಿದ ಬಗ್ಗೆ ಅನುಭವಗಳನ್ನು ಹಂಚಿಕೊಂಡರು. “ಸಿನಿಮಾವು ಆದಿಯಿಂದ ಅಂತ್ಯದವರೆಗೂ ಪದ್ಮಗಂಧಿಯ ಪರಿಮಳ ಪಸರಿಸುತ್ತದೆ. ದೈವೀಕ ಗಂಧ ಅಂಟಿಸಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಕಥೆ ಇರುವುದು ವಿಶೇಷ.  ನಮ್ಮಲ್ಲಿ ದೈವೀಕ ಅನುಭೂತಿ ಸ್ಫುರಿಸುವ ಕಮಲ ಪುಷ್ಪದ ಬಗ್ಗೆ ಆಳವಾಗಿ ಅರಿವಿನ ಪರಧಿಯನ್ನು ವಿಸ್ತರಿಸಿಕೊಳ್ಳುತ್ತಾ, ಅದರ ಅಗಾಧತೆ ಮೊಗೆದರೂ ಮುಗಿಯದ ಅಕ್ಷಯ ಪಾತ್ರಯಂತೆ ಭಾಸವಾಗುತ್ತದೆ. ಇವೆಲ್ಲದರ ಬಗ್ಗೆ ಸಂಶೋಧನೆ ನಡೆಸಿ, ಹಲವು ವಿಷಯಗಳನ್ನು ಸನ್ನಿವೇಶಗಳಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕರು ನನ್ನ ಮನಸ್ಸಿನಲ್ಲಿರುವಂತೆ ತೆರೆ ಮೇಲೆ ತೋರಿಸಿದ್ದಾರೆ” ಎಂದು ನಿರ್ಮಾಪಕಿ ಎಸ್.ಆರ್.ಲೀಲಾ ಅಭಿಪ್ರಾಯಪಟ್ಟರು.

cinibeat