cinibeat

Cinibeat Kannada Sandalwood

ಗಣೇಶ್‌ ಮುಂದಿನ ಚಿತ್ರಕ್ಕೆ ಎಷ್ಟು ದೊಡ್ಡ ಸೆಟ್‌ ಹಾಕಿದ್ದಾರೆ ಗೊತ್ತಾ?

ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ‘ಪಿನಾಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನೆಲಮಂಗಲ ಬಳಿ ಚಿತ್ರಕ್ಕಾಗಿ ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್‍ ಹಾಕಲಾಗಿದೆ. ಸೆಟ್‍ ಎಂದರೆ ಅದು 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್‍. ಒಂದು ನಗರವನ್ನೇ ನಿರ್ಮಿಸಲಾಗಿದ್ದು, ಮಧ್ಯದಲ್ಲೊಂದು ಅರ್ಧನಾರೀಶ್ವರನ ಪ್ರತಿಮೆ ನಿಲ್ಲಿಸಲಾಗಿದೆ. ಇಲ್ಲಿ ಕಳೆದ 32 ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, […]Read More

Cinibeat Kannada Sandalwood

ಸೃಜನ್‌ ʼಜಿಎಸ್‌ಟಿʼಗೆ ಯಾವ ಸರ್ಟಿಫಿಕೇಟ್‌ ಸಿಕ್ತು ಗೊತ್ತಾ?

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ “GST” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರವನ್ನು ನೀಡಿದೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. “GST” ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ […]Read More

Cinibeat Kannada Sandalwood

ಮಾರುತ ಚಿತ್ರದ ಬಗ್ಗೆ ಹೊಸ ಅಪ್ಡೇಟ್‌ ಇಲ್ಲಿದೆ

ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ “ಮಾರುತ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಸದ್ಯ ಚಿತ್ರಕ್ಕೆ ರೀರಕಾರ್ಡಿಂಗ್ ನಡೆಯುತ್ತಿದ್ದು, ಭಾರತದ ಹೆಸರಾಂತ ವಾದ್ಯಗಾರರು(ಮ್ಯುಸಿಷಿಯನ್ಸ್) ಇದರಲ್ಲಿ ಪಾಲ್ಗೊಂಡಿದ್ದಾರೆ. ” ಮಾರುತ” ಚಿತ್ರದಲ್ಲಿ ರೀರೆಕಾರ್ಡಿಂಗ್ ಸಹ ಪ್ರಮುಖವಾಗಿದ್ದು, ಅಂದುಕೊಂಡ ರೀತಿಯಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಚಿತ್ರದ […]Read More

Sandalwood

ಪುಣ್ಯಾತ್‌ ಗಿತ್ತಿ ಎಂದು ಹಾಡಿದ ಖೇಲಾ ತಂಡ

ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರಕ್ಕಾಗಿ ಪ್ರಮೋದ್ ಜೋಯಿಸ್ ಬರೆದಿರುವ, ಖ್ಯಾತ ಗಾಯಕ ವೇಲ್ ಮುರುಗನ್ ಹಾಡಿರುವ “ಪುಣ್ಯಾತ್ ಗಿತ್ತೀ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಎಂ.ಎಸ್ ತ್ಯಾಗರಾಜ್ ಸಂಗೀತ ನೀಡಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಆಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ‌ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು‌ ಮಾತನಾಡಿದರು. ನಾನು ಕನ್ನಡದ ಹಿರಿಯ ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಅವರ […]Read More

Cinibeat Kannada Sandalwood

ಹೊಸ ʼಘೋಸ್ಟ್‌ʼಗೆ ಸುಧಾರಾಣಿ ರೂವಾರಿ

1978 ರಲ್ಲಿ ಬಂದಂತಹ, ಸಾಹಸ ಸಿಂಹ ಡಾ ವಿಷ್ಣುವರ್ಧನ್ ನಾಯಕತ್ವದ ಕಿಲಾಡಿ ಕಿಟ್ಟು ಮೂಲಕ ಕನ್ನಡ ಚಿತ್ರರಂಗಕ್ಕೆ ಬಾಲನಟಿಯಾಗಿ ಪದಾರ್ಪಣೆ ಮಾಡಿದ್ದ ಸುಧಾರಾಣಿ, ನಂತರದ ದಿನಗಳಲ್ಲಿ 1986 ರಲ್ಲಿ ಶಿವರಾಜ್ ಕುಮಾರ್ ಜೊತೆಗೆ ನಾಯಕಿಯಾಗಿ ಆನಂದ್ ಚಿತ್ರದಲ್ಲಿ ನಟಿಸುವುದರ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿ, ಇಲ್ಲಿಯ ತನಕ ಬಹಳಷ್ಟು ಚಿತ್ರಗಳಲ್ಲಿ ಕನ್ನಡದ ಎಲ್ಲಾ ಸೂಪರ್ ಸ್ಟಾರ್ಸ್ ಗಳ ಜೊತೆಗೆ ನಾಯಕಿಯಾಗಿ ನಟಿಸಿ, ಸೈ ಎನಿಸಿ ಕೊಂಡಿದ್ದಲ್ಲದೆ, ಕಾಲ ಕ್ರಮೇಣ ಪೋಷಕ ಪಾತ್ರಗಳಲ್ಲಿಯೂ ಸಹ ನಟಿಸಿ ಬ್ಯುಸಿಯಾಗಿದ್ದರು. ಶ್ರೀರಸ್ತು […]Read More

Cinibeat Kannada Sandalwood

ಮಾತೊಂದ ಹೇಳುವೆ ಟ್ರೇಲರ್‌ ಅಲ್ಲಿ ಏನಿದೆ ವಿಶೇಷತೆ?

ವಿಭಿನ್ನ ರೀತಿಯ ಪ್ರಚಾರ ತಂತ್ರಗಳ ಮೂಲಕ ಗಮನ ಸೆಳೆದಿರೋ ಮಯೂರ್ ಕಡಿ ನಿರ್ದೇಶನದ ‘ಮಾತೊಂದ ಹೇಳುವೆ’ ಚಿತ್ರದ ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದೆ. ಬಿಡುಗಡೆಯಾದ ಕ್ಷಣದಿಂದಲೇ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಬಿಡುಗಡೆಗೂ ಪೂರ್ವಭಾವಿಯಾಗಿ ಚಿತ್ರತಂಡ  ‘ ಟ್ರೇಲರ್ ಡಿಕೋಡ್ ‘ ಸ್ಪರ್ಧೆ ಹೊರಬಿಟ್ಟಿತ್ತು. ಚಿತ್ರದ ನಾಯಕ ಮತ್ತು ನಾಯಕಿಯ ಡೈಲಾಗ್ ಮ್ಯೂಟ್ ಮಾಡಿ, ಜನರಿಗೆ ಡೈಲಾಗ್ ಊಹಿಸಲು ಈ ಸ್ಪರ್ಧೆ ಏರ್ಪಡಿಸಲಾಗಿತ್ತು. ಸರಿ ಉತ್ತರ ನೀಡಿದ ಮೊದಲ 5 ಜನರಿಗೆ ತಲಾ […]Read More

Cinibeat Kannada Sandalwood

ಧರ್ಮ ಕೀರ್ತಿರಾಜ್ ಅಭಿನಯದ ಬುಲೆಟ್ ಶೀಘ್ರದಲ್ಲೇ ತೆರೆಗೆ

ತೆಲುಗು , ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಅಭಿನಯಿಸಿರುವ ಸತ್ಯಜಿತ್ ಶಬ್ಬೀರ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಬಹುಜನ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷರಾದ ಆರ್ ಎಂ ಎನ್ ರಮೇಶ್ ಹಾಗೂ ನಟಿ ನಿಖಿತ ಸ್ವಾಮಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಟೀಸರ್ ಹಾಗೂ ಹಾಡುಗಳನ್ನು ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು […]Read More

Cinibeat Kannada Sandalwood

ಬದುಕು ಕಾಯೋ ಚೌಕಿದಾರ ಅಪ್ಪನಿಗಾಗಿ ಈ ಹಾಡು

ಚೌಕಿದಾರ್ ಸಿನಿಮಾ ತನ್ನ ಕಂಟೆಂಟ್ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚೆಗೆ ಟೀಸರ್ ಮೂಲಕ ಗಮನಸೆಳೆದಿರುವ ಚಿತ್ರವೀಗ ಹಾಡಿನ ಮೂಲಕ ಸಿನಿರಸಿಕರಿಗೆ ಆಮಂತ್ರಣ ಕೊಟ್ಟಿದೆ. ಚೌಕಿದಾರ್ ಸಿನಿಮಾದ ಮೊದಲ ಹಾಡು, ‘Appa anthem song‘ MRT ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಅನಾವರಣಗೊಂಡಿದೆ. ಅಪ್ಪ ಮಗನ ಬಾಂಧವ್ಯದ ಗೀತೆಯಲ್ಲಿ ಸಾಯಿ ಕುಮಾರ್ ಹಾಗೂ ಪೃಥ್ವಿ ಅಂಬಾರ್ ತಂದೆ ಮಗನಾಗಿ ಕಾಣಿಸಿಕೊಂಡಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಪೊಣಿಸಿರುವ ಹಾಡಿಗೆ ಸಚಿನ್ ಬಸ್ರೂರ್ ಸಂಗೀತ, ವಿಜಯ್ ಪ್ರಕಾಶ್ ಅವರ ಧ್ವನಿ […]Read More