ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ “ಅಪಾಯವಿದೆ ಎಚ್ಚರಿಕೆ” . ನಾಯಕನಾಗಿ “ಅಣ್ಣಯ್ಯ” ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ “ಅಪಾಯವಿದೆ ಎಚ್ಚರಿಕೆ” ಚಿತ್ರ ಸಹ ಸೇರುವ ಎಲ್ಲಾ ಲಕ್ಷಣಗಳಿದೆ. ತೀರ್ಥಹಳ್ಳಿ ಮೂಲದವರಾದ ಅಭಿಜಿತ್ ತೀರ್ಥಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ. ವಿ.ಜಿ.ಮಂಜುನಾಥ್ ಹಾಗು […]Read More
ಪುಷ್ಪ 2 ಸಂಭಾವನೆ ಅಲ್ಲು ಅರ್ಜುನ್-3** ಕೋಟಿ, ರಶ್ಮಿಕಾ-1** ಕೋಟಿ, ಶ್ರೀಲೀಲಾ-2* ಕೋಟಿ
ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2 ದಿ ರೂಲ್’ ಸಿನಿಮಾ ಸಖತ್ ಸದ್ದು ಮಾಡ್ತಿದೆ. ಸುಮಾರು 3 ಗಂಟೆ 25 ನಿಮಿಷದ ಈ ಚಿತ್ರ ಬ್ಲಾಕ್ ಬಸ್ಟರ್ ಟಾಕ್ ಆಗಿದೆ. ಬಿಡುಗಡೆಗೂ ಮುನ್ನವೇ ಪ್ರೀ ಬುಕ್ಕಿಂಗ್ನಲ್ಲಿ 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಮೊದಲ ದಿನದ ಒಟ್ಟು ಕಲೆಕ್ಷನ್ 294 ಕೋಟಿ ಎಂದು ವರದಿಯಾಗಿದೆ. ಕೋಟಿ ಕೋಟಿ ಬಾಚುತ್ತಿರುವ ಈ ಸಿನಿಮಾವನ್ನು ಸುಮಾರು 400 ರಿಂದ 500 ಕೋಟಿ ಬಜೆಟ್ನಲ್ಲಿ ನಿರ್ಮಾಣ ಮಾಡಲಾಗಿದೆ. ಬಾಕ್ಸ್ ಆಫೀಸ್ನಲ್ಲಿ ಸೌಂಡ್ […]Read More
ವೀಕೆಂಡ್ ನಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಗ್ರಾಂಡ್ ಫಿನಾಲೆ ಧಮಾಕ; ವೀಕ್ಷಕರ ಮನದಲ್ಲಿ ಶುರುವಾಗಲಿದೆ ತಕಧಿಮಿತ! ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ. ಜನಪ್ರಿಯ ಧಾರಾವಾಹಿಗಳಿಂದ ಮಾತ್ರವಲ್ಲದೇ ರಿಯಾಲಿಟಿ ಶೋಗಳಿಗೆ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾಗಿದೆ. ಈ ರಿಯಾಲಿಟಿ ಶೋಗಳಲ್ಲಿ ಒಂದಾದ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ಕರ್ನಾಟಕ ಡಾನ್ಸ್ ಈಗ ಕೊನೆಯ ಹಂತಕ್ಕೆ ತಲುಪಿದೆ. ಇಡೀ ಸೀಸನ್ ಫುಲ್ ಮನರಂಜನೆ ನೀಡಿದ್ದು, ವಿಭಿನ್ನ ನೃತ್ಯ ಪ್ರಕಾರಗಳಿಂದ ಈಗಾಗಲೇ ಜನರ ಮನ ಗೆದ್ದಿದೆ. […]Read More
ಕನ್ನಡದ ಹಿರಿಯ ನಟಿ ಶ್ರುತಿ ನೂತನ ನಿವಾಸಕ್ಕೆ ಕಾಲಿಟ್ಟಿದ್ದಾರೆ. ಶ್ರುತಿ ಅವರ ಹೊಸ ಮನೆಯ ಗೃಹಪ್ರವೇಶ ಸಮಾರಂಭ ಅದ್ಧೂರಿಯಾಗಿ ಜರುಗಿದೆ. ಗೃಹಪ್ರವೇಶಕ್ಕೆ ಸ್ಯಾಂಡಲ್‌ವುಡ್‌ನ ಸ್ಟಾರ್ ಕಲಾವಿದರು ಹಾಜರಿದ್ದರು. ಫೋಟೋ ಆಲ್ಬಂ ಇಲ್ಲಿದೆ ನೋಡಿ…Read More
ಗೀತಾ ಪಿಕ್ಚರ್ಸ್ 4ನೇ ಪ್ರೊಡಕ್ಷನ್ ಘೋಷಣೆ | ನಾಯಕ ಧೀರನ್ ರಾಮ್‌ಕುಮಾರ್ ಈ ವರ್ಷದ ಬ್ಲಾಕ್‌ಬಸ್ಟರ್ ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್ ಮತ್ತೊಂದು ಹ್ಯಾಟ್ರಿಕ್ ಘೋಷಣೆಗೆ ಸಿದ್ಧವಾಗಿದೆ! ನವೆಂಬರ್ 14ರಂದು A For Anand, ಡಾ. ಶಿವರಾಜ್‌ಕುಮಾರ್ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಡಾ. ಪಾರ್ವತಮ್ಮ ರಾಜಕುಮಾರ್ ಅವರ ಜನ್ಮದಿನದ ನಿಮಿತ್ತ ತಮ್ಮ 4ನೇ ಚಿತ್ರವನ್ನು ಇಂದು ಪ್ರಕಟಿಸಿದೆ. ಈ ಹೊಸ ಚಿತ್ರದಲ್ಲಿ ಧೀರನ್ ರಾಮ್‌ಕುಮಾರ್ ನಾಯಕನಾಗಿ ನಟಿಸಲಿದ್ದಾರೆ. ಈ ಚಿತ್ರವನ್ನು […]Read More
“ಪುಷ್ಪ ೨” ಚಿತ್ರವು ಅವಧಿಗೂ ಮುನ್ನ ಪ್ರದರ್ಶನಗೊಳ್ಳುತ್ತಿರುವ ಚಿತ್ರಮಂದಿರಗಳ ವಿರುದ್ಧ ಕ್ರಮ ಕೈಗೊಂಡಿರುವುದಕ್ಕಾಗಿ ಬೆಂಗಳೂರು ಪೊಲೀಸ್ ಕಮೀಷನರ್ ಬಿ.ದಯಾನಂದ್ ಅವರಿಗೆ ಹಾಗೂ ಬೆಂಗಳೂರು ಡೆಪ್ಯುಟಿ ಕಮೀಷನರ್ ಹಾಗೂ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಜಗದೀಶ್ ಅವರಿಗೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಗೌರವ ಕಾರ್ಯದರ್ಶಿಗಳಾದ ಡಿ.ಕೆ.ರಾಮಕೃಷ್ಣ ಹಾಗೂ ಜಂಟಿ ಕಾರ್ಯದರ್ಶಿಗಳಾದ ರಮೇಶ್ ಯಾದವ್ ಅಭಿನಂದನೆ ತಿಳಿಸಿದರುRead More
“ಕಲ್ಟ್” ಸಿನಿಮಾದ ಚಿತ್ರೀಕರಣದ ವೇಳೆ ನಡೆದ ಡ್ರೋನ್ ಅವಘಡ. ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನೀಷಯನ್ ಸಂತೋಷ್ . ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ ಡ್ರೋನ್ ಕ್ಯಾಮೆರಾ ಆಕಸ್ಮಿಕವಾಗಿ ವಿಂಡ್ ಫ್ಯಾನ್ ಗೆ ಸಿಲುಕಿ ಹಾನಿಯಾಗಿತ್ತು. ಇದೊಂದು ಆಕಸ್ಮಿಕ ಘಟನೆ. ಆದರೆ ಡ್ರೋನ್ ಟೆಕ್ನೀಷಿಯನ್ ಸಂತೋಷ್ ಅವರು ಡ್ರೋನ್ ಕ್ಯಾಮೆರಾ ಗೆ ಆದ ಹಾನಿಯಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಹಾಗೂ […]Read More
ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ “ಈ ಪಾದ ಪುಣ್ಯಪಾದ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ . ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದಖ್ಯಾತಿಯ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರರವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮತ್ತೊಂದು ಚಿತ್ರ”ಈ ಪಾದ ಪುಣ್ಯಪಾದ”.ಇತ್ತೀಚಿಗೆ ಈ ಚಿತ್ರದ ಮೊದಲ ಪೋಸ್ಟರ್ ಅನ್ನು ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಪ್ರತಿಯೊಬ್ಬ ಪ್ರೇಕ್ಷಕನಿಗೂ ಕೂಡ ಹೊಸ […]Read More
ಬಹು ನಿರೀಕ್ಷಿತ “45” ಚಿತ್ರಕ್ಕೆ ಹಾಲಿವುಡ್ ನ ಹೆಸರಾಂತ ತಂತ್ರಜ್ಞರಿಂದ ವಿ.ಎಫ್.ಎಕ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಯವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಚಿತ್ರ “45” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ […]Read More
‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದ ಆರಂಭವಾಗಿ 9 ವಾರಗಳು ಉರುಳಿವೆ. 10ನೇ ವಾರ ಚಾಲ್ತಿಯಲ್ಲಿದೆ. ಈಗಾಗಲೇ ‘ಬಿಗ್ ಬಾಸ್’ ಮನೆಯಿಂದ ಯಮುನಾ ಶ್ರೀನಿಧಿ, ಹಂಸ, ಮಾನಸಾ, ಅನುಷಾ ರೈ, ಧರ್ಮ ಕೀರ್ತಿರಾಜ್ ಔಟ್ ಆಗಿದ್ದಾರೆ. ರಂಜಿತ್, ಜಗದೀಶ್ ಕಿಕ್ ಔಟ್ ಆಗಿದ್ದಾರೆ. ಶೋಭಾ ಶೆಟ್ಟಿ ಕ್ವಿಟ್ ಮಾಡಿದ್ದಾರೆ. ಈ ವಾರ ಯಾರು ಔಟ್ ಆಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದೆ. ಆದರೆ, ಈ ವಾರ ಎಲಿಮಿನೇಷನ್ ಇಲ್ಲ. ಈ ವಾರ.. ಅರ್ಥಾತ್ 10ನೇ ವಾರದ ನಾಮಿನೇಷನ್ […]Read More