ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನಪ್ರಿಯವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಪ್ರಿ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿತು. ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ […]Read More
ಎಸ್ ಎನ್ ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಕಳೆದ ತಿಂಗಳು ಅದ್ದೂರಿಯಾಗಿ ನೆರವೇರಿತ್ತು. ಬಹು ನಿರೀಕ್ಷಿತ ಹಾಗೂ ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣವಾಗಿದೆ. ಚಿತ್ರತಂಡದ ಸಹಕಾರದಿಂದ ನಮ್ಮ “ಪ್ರೊಡಕ್ಷನ್ ನಂ ೧” ಚಿತ್ರದ ಮೊದಲ ಹಂತದ ಚಿತ್ರೀಕರಣ […]Read More
ನಟ ಆದಿತ್ಯ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ , ಸಿಲ್ಕ್ ಮಂಜು ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಟೆರರ್” ಚಿತ್ರದ “ಹರ ಹರ ಮಹದೇವ” ಎಂಬ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಆದಿತ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಶಿವನ ಕುರಿತದಾ ಈ ಅದ್ಭುತ ಗೀತೆಯನ್ನು ಡಾ||ವಿ.ನಾಗೇಂದ್ರಪ್ರಸಾದ್ ಬರೆದಿದ್ದು, ಹರ್ಷವರ್ಧನ್ ರಾಜ್ ಸಂಗೀತ ನೀಡಿದ್ದಾರೆ. ಎಂ.ಆರ್.ಟಿ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದ್ದು, […]Read More
ಆರ್ ಹೆಚ್ ಎಂಟರ್ ಪ್ರೈಸಸ್ ಮತ್ತು ಶ್ರೀತಿರುಮಲ ಸಿನಿ ಎಂಟರ್ಟೈನ್ಮೆಂಟ್ ಅರ್ಪಿಸುವ, ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. “ಪೆನ್ ಡ್ರೈವ್” ಕಾಲ್ಪನಿಕ ಕಥಾಹಂದರ ಹೊಂದಿರುವ ಚಿತ್ರ. ನಿರ್ಮಾಪಕರ ಸಹಕಾರದಿಂದ ಅಂದುಕೊಂಡ ಯೋಜನೆಯಂತೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ತೆರೆಗೆ ಬರಲು […]Read More
ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿನೋದ್ ಪ್ರಭಾಕರ್ ಈ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ ಜೊತೆಗೆ ಈವರೆಗೂ ಮಾಡಿರದ ಪಾತ್ರ ಕೂಡ ಮಾಡಿದ್ದಾರೆ. […]Read More
ಮಧುಸೂದನ್ ಹವಾಲ್ದಾರ್ ನಿರ್ಮಾಣ, ನಿರ್ದೇಶನ ಹಾಗೂ ಸಂಗೀತ ನಿರ್ದೇಶನದ “ಮೋಳಿಗೆ ಮಾರಯ್ಯ” ಚಿತ್ರದ ಹಾಡುಗಳ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ಅಕ್ಷಯ ತೃತೀಯ ಹಾಗೂ ಬಸವ ಜಯಂತಿ ಶುಭದಿನದಂದು ನೆರವೇರಿತು. ಬೇಲಿಮಠದ ಶ್ರೀಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಭಕ್ತಿಪ್ರಧಾನ ಈ ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ನಿವೃತ್ತ ಐ ಎ ಎಸ್ ಅಧಿಕಾರಿ ಸಿ.ಸೋಮಶೇಖರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಧುಸೂದನ್ ಹವಾಲ್ದಾರ್ ಅವರು ಮಹಾನ್ ಶರಣರಾದ “ಮೋಳಿಗೆ ಮಾರಯ್ಯ” ಅವರ ಕುರಿತಾದ ಚಿತ್ರ ನಿರ್ಮಾಣ ಮಾಡುತ್ತಿರುವುದು […]Read More
Operation Sindoor ಬಗ್ಗೆ ತಾರೆಯರ ಪ್ರತಿಕ್ರಿಯೆ
ಪಹಲ್ಗಾಂನಲ್ಲಿ ಉಗ್ರರು ನಡೆಸಿದ ಅಮಾನುಷ ಕೃತ್ಯಕ್ಕೆ ಪ್ರತಿಕ್ರಿಯೆಯಾಗಿ ಭಾರತದ ಸೇನೆ ʼಆಪರೇಶನ್ ಸಿಂದೂರ್ʼ ನಡೆಸಿ, 9 ಆತಂಕವಾದಿ ತಾಣಗಳನ್ನು ನಾಶಗೊಳಿಸಿದೆ. ಈ ವಿಷಯವನ್ನು ಭಾರತ ಚಿತ್ರರಂಗದ ಹಲವು ತಾರೆಯರು ಮೆಚ್ಚಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್, ಪರೇಶ್ ರಾವಲ್, ಅನುಪಮ್ ಖೇರ್, ಸೇರಿದಂತೆ ಹಲವರು ʼಭಾರತ ಸೇನೆಗೆ ಸಲಾಂʼ ಎನ್ನುವ ಅರ್ಥದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೆಯೇ, ಕಾಜಲ್ ಅಗರ್ವಾಲ್, ಕಂಗನಾ ರಣಾವತ್, ನಿಮ್ರತ್ ಕೌರ್, ತಾಪ್ಸಿ ಪನ್ನು, […]Read More
ಕಿಚ್ಚನ ಕಡೆಯಿಂದ ಅಭಿಮಾನಿಗಳಿಗಳಿಗೆ ಸಿಕ್ತು ಭರ್ಜರಿ ಸುದ್ದಿ.. ಅಧಿಕೃತವಾಗಿ ಇಂಡಸ್ಟ್ರಿಗೆ ಜ್ಯೂ ಕಿಚ್ಚನ ಎಂಟ್ರಿ.. ಹೊಸ ವರ್ಷಕ್ಕೆ ಹೊಸ ಬ್ರ್ಯಾಂಡ್: ಹೀರೋ ಆಗಿ ಸುದೀಪ್ ಅಕ್ಕನ ಮಗ ಸಂಚಿತ್ ಎಂಟ್ರಿ ಮ್ಯಾಕ್ಸ್ ಸಿನಿಮಾದ ಬ್ಲಾಕ್ ಬ್ಲಸ್ಟರ್ ಸಕ್ಸಸ್ ಖುಷಿಯಲ್ಲಿರುವ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಸುದ್ದಿ ಕೊಟ್ಟಿದ್ದಾರೆ. ಹೊಸ ವರ್ಷಕ್ಕೆ ಅಭಿನಯ ಚಕ್ರವರ್ತಿ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಕಿಚ್ಚನ ಕಡೆಯಿಂದ ಬಂದ ಸುದ್ದಿ ಕೇಳಿ ಫ್ಯಾನ್ಸ್ ಫುಲ್ ಥ್ರಿಲ್ ಆಗಿದ್ದಾರೆ. ಅಂದ್ಹಾಗೆ ಇದು ಕಿಚ್ಚ […]Read More
ಪ್ರೇಮಿಗಳ ದಿನದಂದು(ಫೆಬ್ರವರಿ 14) ಬಿಡುಗಡೆಯಾಗಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್”.ನೂತನ ವರ್ಷದ ಮೊದಲ ದಿನದಂದು ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ . ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ “ಫಸ್ಟ್ ರ್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕನಾಗಿ ನಟಿಸಿರುವ, ಅತ್ಯಂತ ನಿರೀಕ್ಷಿತ ಸಿನಿಮಾ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಬಿಡುಗಡೆ ದಿನಾಂಕ ಹೊಸವರ್ಷದ ಮೊದಲ ದಿನದಂದು ಘೋಷಣೆಯಾಗಿದೆ. ನಗುವೇ ಪ್ರಾಧಾನವಾಗಿರುವ ಈ ಚಿತ್ರ ಫೆಬ್ರವರಿ 14, ಪ್ರೇಮಿಗಳ ದಿನದಂದು ಅದ್ದೂರಿಯಾಗಿ […]Read More
ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ “31 DAYS” ಚಿತ್ರದ ಒಪೇರ ಸಾಂಗ್ . ಇದು ಜನಪ್ರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ “ಜಾಲಿಡೇಸ್” ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ “31 DAYS” ಚಿತ್ರಕ್ಕಾಗಿ ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿ, ನಿರಂಜನ್ ಶೆಟ್ಟಿ ಅವರೊಂದಿಗೆ ನಟಿಸಿರುವ ಒಪೇರ ಶೈಲಿಯ ಗೀತೆ ಡಿಸೆಂಬರ್ 31 ನೇ ತಾರೀಖು ಬಿಡುಗಡೆಯಾಯಿತು. ಇದು ವಿ.ಮನೋಹರ್ ಅವರು ಸಂಗೀತ ಸಂಯೋಜಿಸಿರುವ 150ನೇ […]Read More