ಪೀಟರ್ ಸಿನಿಮಾ ತನ್ನ ಕಂಟೆಂಟ್ ಮೂಲಕ ಸಿನಿಮಾಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಚಿತ್ರದ ಹಾಡುಗಳ ಮೇಲೆ ನಿರೀಕ್ಷೆ ಕೂಡ ಹೆಚ್ಚಿಸುತ್ತಿದೆ. ಇತ್ತೀಚೆಗಷ್ಟೇ ಮಲಯಾಳಂ ಗಾಯಕ ಪ್ರಣವಂ ಸಸಿಯಿಂದ ಹಾಡು ಹಾಡಿಸಿದ್ದ ಚಿತ್ರತಂಡವೀಗ ಮತ್ತೊಂದು ಹಾಡಿಗೆ ಬಾಲಿವುಡ್ ಗಾಯಕರನ್ನು ಕರೆಸಿದೆ. ಪೀಟರ್ ಗಾಗಿ ಬಾಲಿವುಡ್ ಖ್ಯಾತ ಗಾಯಕ ಹಾಗೂ ನಿರ್ದೇಶಕ ಅಜಯ್ ಗೋಗವಾಲೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಿಂದಿಯ ಪ್ರಭಾಸ್ ನಟನೆಯ ಆದಿ ಪುರುಷ್, ಅಮೀರ್ ಖಾನ್ ನಟನೆಯ ಪೀ ಕೆ , ಶಾರುಖ್ ನಟನೆಯ ಝೀರೋ ಮತ್ತು […]Read More
ಗೀತಾ ಶಿವರಾಜ್ ಕುಮಾರ್ ಒಡೆತನದ ಗೀತಾ ಪಿಕ್ಚರ್ಸ್ ಸದಾಭಿರುಚಿ ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದೆ. ಅದರ ಭಾಗವಾಗಿ ತಯಾರಾಗುತ್ತಿರುವ ಚಿತ್ರ ಪಬ್ಬಾರ್. ಗೀತಾ ಪಿಕ್ಚರ್ಸ್ ನಾಲ್ಕನೇ ಕೊಡುಗೆ ಪಬ್ಬಾರ್ ಸಿನಿಮಾದ ಮುಹೂರ್ತ ಬೆಂಗಳೂರಿನ ವೀರಾಂಜನೇಯ ದೇಗುಲದಲ್ಲಿ ನೆರವೇರಿದೆ. ವಾಣಿಜ್ಯ ಚಲನಚಿತ್ರ ಮಂಡಳಿ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಕೆವಿ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ದು , ನೆನಪಿರಲಿ ಪ್ರೇಮ್ ಕ್ಯಾಮೆರಾಗೆ ಚಾಲನೆ ಕೊಟ್ಟರು. ಧೀರೆನ್ ನಾಯಕನಾಗಿ ನಟಿಸುತ್ತಿರುವ ಪಬ್ಬಾರ್ ಚಿತ್ರಕ್ಕೆ ಶಾಖಾಹಾರಿ ಸಾರಥಿ ಸಂದೀಪ್ ಸುಂಕದ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಾಯಕಿಯಾಗಿ […]Read More
ಚಂದನವನದ ಹಿರಿಯ ನಟ ಡಿಂಗ್ರಿ ನಾಗರಾಜ್ ರವರ ಸುಪುತ್ರ ನಟ ರಾಜವರ್ಧನ್ ಈಗ ನಿರ್ಮಾಪಕರಾಗಿ ಹೆಜ್ಜೆ ಇಡುತ್ತಿದ್ದಾರೆ. ನಗರದ ಜಿಟಿ ಮಾಲ್ ನಲ್ಲಿರುವ MMB Legacy ಯಲ್ಲಿ ತಮ್ಮ ನಿರ್ಮಾಣ ಸಂಸ್ಥೆಯಾದ Barn Swallow company ಪ್ರೊಡಕ್ಷನ್ ಹೌಸ್ ಮೂಲಕ ಸಾಲು ಸಾಲಾಗಿ ಚಿತ್ರ ಮಾಡಲು ಸಿದ್ಧರಾಗಿದ್ದು , “ಜಾವಾ” ಎಂಬ ಚಿತ್ರದ ಟೈಟಲ್ ರಿವಿಲ್ ಮಾಡಲಾಯಿತು. ಈ ಚಿತ್ರವನ್ನು ಪತ್ರಕರ್ತ ಹಾಗೂ ಬರಹಗಾರರಾದ ದೇವಾ ಚಕ್ರವರ್ತಿ ನಿರ್ದೇಶನ ಮಾಡ್ತಿದ್ದು, ನಟರಾಗಿ ಮ್ಯಾಸಿವ್ ಹೀರೋ ರಾಜವರ್ಧನ್ ನಾಯಕನಾಗಿ […]Read More
ನಮ್ಮ ಸುತ್ತಮುತ್ತ ಅದೆಷ್ಟೋ ಕಥೆಗಳು ಇರುತ್ತವೆ. ಅದೆಷ್ಟೋ ವಿಚಿತ್ರ ಕ್ಯಾರೆಕ್ಟರ್ ಗಳು ಇರ್ತಾರೆ. ಆ ಕ್ಯಾರೆಕ್ಟರ್ ಗಳನ್ನೆ ಇಟ್ಟುಕೊಂಡು ಸಿನಿಮಾ ಮಾಡಿದಾಗ ಸಾಕಷ್ಟು ಜನರನ್ನ ತಲುಪಲಿದೆ. ಅಂಥದ್ದೊಂದು ಕಥೆಯನ್ನ ಹೊತ್ತು ಬರ್ತಾ ಇರೋದೆ ರಾಜರತ್ನಾಕರ ಸಿನಿಮಾ. ಈ ಸಿನಿಮಾದಲ್ಲಿ ಬೆಂಗಳೂರಿನ ಮಧ್ಯಮ ವರ್ಗದವರ ಕಥೆಯನ್ನ ಒಳಗೊಂಡಿದೆ. ದುರಹಂಕಾರಿಯೊಬ್ಬನ ಕಥೆ. ಸೋಮಾರಿತನದಿಂದ ಬಂದಂತ ದುರಹಂಕಾರದ ಪರಮಾವಧಿ. ಆದರೆ ಮುಂದೆ ಆತ ಜೀವನ ಕಟ್ಟಿಕೊಳ್ಳುವುದು ಹೇಗೆ ಎಂಬ ಕಥೆಯನ್ನ ರಾಜರತ್ನಕರದಲ್ಲಿ ತೋರಿಸಿಲಾಗಿದೆ. ಈ ರೀತಿಯ ಕ್ಯಾರೆಕ್ಟರ್ ಹಲವು ಮನೆಗಳಲ್ಲಿ ಇರಬಹುದು. […]Read More
ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಗ್ಲಾಮರಸ್ ಪಾತ್ರಗಳ ಮೂಲಕ ಸಿನಿಪ್ರಿಯರ ಮನ-ಗಮನ ಸೆಳೆದಿದ್ದ ನಟಿ ರಾಗಿಣಿ ದ್ವಿವೇದಿ, ಈಗ ನಿಧಾನವಾಗಿ ಕಂಟೆಂಟ್ ಆಧರಿತ ಸಿನಿಮಾಗಳತ್ತ ಒಲವು ತೋರುತ್ತಿದ್ದಾರೆ. ಹೌದು, ಇತ್ತೀಚಿನ ದಿನಗಳಲ್ಲಿ ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಬಯಸುತ್ತಿರುವ ರಾಗಿಣಿ ದ್ವಿವೇದಿ, ಈಗ ಅಂಥದ್ದೇ ಒಂದು ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಅಂದಹಾಗೆ, ರಾಗಿಣಿ ದ್ವಿವೇದಿ ನಾಯಕಿಯಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾದ ಹೆಸರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’. ಕೆಲ ದಿನಗಳ ಹಿಂದಷ್ಟೇ ಈ […]Read More
ಇತ್ತೀಚೆಗೆ ಗಾಯಕ ಸೋನು ನಿಗಂ ಅನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗಿದೆ. ಆದರೆ, ಹೀಗೆ ಮಾಡುವುದರಿಂದ ಯಾರಿಗೆ ಲಾಭ? ಯಾರಿಗೆ ನಷ್ಟ? ಅಷ್ಟಕ್ಕೂ ಬ್ಯಾನ್ ಮಾಡುವ ಮೊದಲು ಸೋನು ನಿಗಂಗೆ ಕನ್ನಡದಲ್ಲಿ ಈ ಮಟ್ಟದ ಅವಕಾಶ, ಖ್ಯಾತಿ, ಪ್ರೀತಿ ದೊರಕಲು ಕಾರಣವೇನು? ಸೋನು ಅಷ್ಟೇ ಅಲ್ಲ, ಕನ್ನಡ ಹಾಡುಗಳನ್ನು ಹಾಡಲು ಇತರ ಭಾಷೆಗಳ ಗಾಯಕರ ಮೊರೆ ಹೋಗುವ ಹಿಂದಿನ ಉದ್ದೇಶವೇನು ಎನ್ನುವುದರ ಕುರಿತ ವಿವರ ಇಲ್ಲಿದೆ. ಬೇರೆ ಭಾಷೆಯವರಿಗೆ ಆದ್ಯತೆ:ಕನ್ನಡ ಚಿತ್ರರಂಗವು ತನ್ನದೇ ಆದ ವಿಶಿಷ್ಟ ಸಂಸ್ಕೃತಿ, […]Read More
ಸ್ಯಾಂಡಲ್ವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಹೆಸರು ‘A for ಆನಂದ್’. ಇತ್ತೀಚೆಗಷ್ಟೆ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಕ್ಲ್ಯಾಪ್ ಮಾಡಿದರು. ಮಗುವಿನಿಂದ ಕ್ಯಾಮೆರಾಗೆ ಚಾಲನೆ ನೀಡಿಸಿದರು. ಮುಹೂರ್ತದ ಬಳಿಕ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಸುದ್ದಿಗೋಷ್ಠಿಯ ಪ್ರಮುಖ ಆಕರ್ಷಣೆ ಮಕ್ಕಳು. ‘A for ಆನಂದ್’ ಮಕ್ಕಳ ಸಿನಿಮಾವಾಗಿರುವುದರಿಂದ […]Read More
ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ “ಮಾರುತ”. ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಎಸ್ ನಾರಾಯಣ್ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಉತ್ಸಾಹಿ ಯುವ ನಟ ಶ್ರೇಯಸ್ ಮಂಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು […]Read More
ಮರಳಿ ಮನಸಾಗಿದೆ ಸಿನಿಮಾ ಬಹುತೇಕ ಕರಾವಳಿಯ ಕಲಾವಿದರನ್ನು ಒಳಗೊಂಡಿರುವ ಹಾಗೂ ಚಿತ್ರೀಕರಣ ಕೂಡ ಬಹುತೇಕ ಬಾಗ ಕರಾವಳಿ ಭಾಗದಲ್ಲೇ ಮುಗಿಸಿ ನಿರ್ಮಾಣವಾಗುತ್ತಿರುವ ಮನೋಜ್ಞ ಚಿತ್ರವಿದು. ಚಿತ್ರದ ಏನಿದೆನು ಈ ಕಂಪನ ಹಾಡಿನ ಅದ್ದೂರಿ ಬಿಡುಗಡೆ ಕಾರ್ಯಕ್ರಮ ಉಡುಪಿಯ ಯಕ್ಷಗಾನ ಕಲಾರಂಗ ದಲ್ಲಿ ನಡೆಯಿತು.ವಿಶೇಷವಾಗಿ ಕರಾವಳಿಯ ಪ್ರಕೃತಿ ಸೊಬಗಿನ ಸುಂದರ ತಾಣಗಳನ್ನು ಅತ್ಯಂತ ನವೀರಾಗಿ ಸೆರೆಹಿಡಿಯಲಾಗಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಪುತ್ತೂರಿನ ಅರ್ಜುನ್ ವೇದಾಂತ್ ಕಾರ್ಯಕ್ರಮದಲ್ಲಿ ಮಾತನಾಡಿ ಈಗಾಗಲೇ ತುಳು, ಕನ್ನಡ, ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿ ಸೈ […]Read More
ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಲಾಂಛನದಲ್ಲಿ ಪುಟ್ಟಣ್ಣ ಅವರು ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ `ಅಮೃತ ಮತಿ’ ಕನ್ನಡ ಚಿತ್ರವು ಈಗ ಅಮೆಜಾನ್ ಪ್ರೈಮ್ನ ಓ.ಟಿ.ಟಿ. ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಈಗ ಆಸಕ್ತರು ಅಮೇಜಾನ್ ಪ್ರೈಮ್ನಲ್ಲಿ ಈ ಚಿತ್ರವನ್ನು ನೋಡ ಬಹುದಾಗಿದೆ. ಅಮೃತ ಮತಿ' ಚಿತ್ರವು ಹದಿಮೂರನೇ ಶತಮಾನದ ಖ್ಯಾತ ಕನ್ನಡ ಕವಿ ಜನ್ನನಯಶೋಧರ ಚರಿತೆ’ ಕಾವ್ಯ ಪ್ರಸಂಗವನ್ನು ಆಧರಿಸಿ ರೂಪುಗೊಂಡಿದೆ. ಈ ಚಿತ್ರದಲ್ಲಿ ಮೂಲ ಕಥನವನ್ನು ಮರುಸೃಷ್ಟಿ ಮಾಡಿ ನಿರೂಪಿಸಿರುವುದು ಒಂದು ವಿಶೇಷ. ಕನ್ನಡ ಸಾಹಿತ್ಯದಲ್ಲಿ ಮರುಸೃಷ್ಟಿಯ ಪರಂಪರೆಯಿದ್ದು […]Read More