Breaking News : ದರ್ಶನ್‌, ಪವಿತ್ರಗೌಡ ಸೇರಿ 7 ಜನರಿಗೂ ಹೈಕೋರ್ಟ್‌ ಜಾಮೀನು ಮಂಜೂರು

 Breaking News : ದರ್ಶನ್‌, ಪವಿತ್ರಗೌಡ ಸೇರಿ  7 ಜನರಿಗೂ ಹೈಕೋರ್ಟ್‌ ಜಾಮೀನು ಮಂಜೂರು

ರೇಣುಕ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌, ಪವಿತ್ರಗೌಡ ಸೇರಿ ಉಳಿದ ಎಲ್ಲಾ ಕೊಲೆ ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಪವಿತ್ರಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್​ಗೆ ಜಾಮಿನು ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.

ದರ್ಶನ್ ಅವರು ಈಗಾಗಲೇ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಇದೀಗ ಅವರಿಗೆ ಪೂರ್ಣಾವಧಿಗೆ ಜಾಮೀನು ಮಂಜೂರು ಆಗಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ದರ್ಶನ್​ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬೆಂಗಳೂರಿನ ಬಿಜಿಎಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

cinibeat