ಕನ್ನಡದ ರೌಡಿ ಬೇಬಿ ರಿಲೀಸ್ ಡೇಟ್ ಫಿಕ್ಸ್

 ಕನ್ನಡದ ರೌಡಿ ಬೇಬಿ ರಿಲೀಸ್ ಡೇಟ್ ಫಿಕ್ಸ್

ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್ ನಾಯಕ -ನಾಯಕಿಯಾಗಿ ಅಭಿನಯಿಸಿರುವ “ರೌಡಿ ಬೇಬಿ” ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರ ಫೆಬ್ರವರಿ 11ರಂದೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Warfoot studios ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು Epuru ಕೃಷ್ಣ ನಿರ್ದೇಶನ ಮಾಡಿದ್ದಾರೆ. ಸಾಮ್ರಾಟ್ ಛಾಯಾಗ್ರಹಣ, ಅಭಿಷೇಕ್ ಹಿನ್ನೆಲೆ ಸಂಗೀತ, ಅರ್ಮಾನ್ ಮೆರುಗು ಸಂಗೀತ ನಿರ್ದೇಶನ ಹಾಗೂ ವೆಂಕಿ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.

ಎಸ್ ಎಸ್ ರವಿಗೌಡೇ ಅವರಿಗೆ ದಿವ್ಯ ಸುರೇಶ್ ಹಾಗೂ ಹೀರಾ ಕೌರ್ ನಾಯಕಿಯರಾಗಿ ನಟಿಸಿದ್ದಾರೆ. ಅಮಿತ್, ಕೆಂಪೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

cinibeat