OTTಯಲ್ಲಿ ದಾಖಲೆ ಬರೆದ ‘ಗರುಡ ಗಮನ ವೃಷಭ ವಾಹನ’!

 OTTಯಲ್ಲಿ ದಾಖಲೆ ಬರೆದ ‘ಗರುಡ ಗಮನ ವೃಷಭ ವಾಹನ’!

2021ರಲ್ಲಿ ಪ್ರೇಕ್ಷಕರ ಮನಗೆದ್ದ ಸಿನಿಮಾಗಳ ಪೈಕಿ ‘ಗರುಡ ಗಮನ ವೃಷಭ ವಾಹನ’ ವಾಹನ ಚಿತ್ರ ಕೂಡ ಪ್ರಮುಖವಾಗಿದೆ. ರಾಜ್​ ಬಿ. ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ರೌಡಿಸಂ ಲೋಕದ ಕಥೆ ಹೇಳಲಾಗಿದೆ. ನಿರ್ದೇಶನದ ಜತೆಗೆ ಪ್ರಮುಖ ಪಾತ್ರದಲ್ಲೂ ರಾಜ್​ ಬಿ. ಶೆಟ್ಟಿ ನಟಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರಕ್ಕೆ ರಿಷಬ್​ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾ ಕನ್ನಡ ಚಿತ್ರರಂಗದಲ್ಲೇ ಬೇರೆಯದ್ದೇ ಫೀಲ್​ ಕೊಟ್ಟಿತ್ತು. ಈ ಹಿಂದೆ ನೋಡಿರದ ರೀತಿಯಲ್ಲಿ ಈ ಸಿನಿಮಾ ಮಜಾ ಕೊಟ್ಟಿತ್ತು. ಒಳ್ಳೆ ಛಾಯಾಗ್ರಹಣ, ಅದ್ಭುತ ಹಿನ್ನೆಲೆ ಸಂಗೀತ, ಕಲಾವಿದರ ಅಭಿನಯ ಎಲ್ಲವೂ ಸಖತ್​ ಕಿಕ್​ ಕೊಟ್ಟಿತ್ತು.

ಕಳೆದ ನ.19ರಂದು ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದ ವಿಭಿನ್ನ ಕಥಾಹಂದರ ಹೊಂದಿದ್ದ ‘ಗರುಡ ಗಮನ ವೃಷಭ ವಾಹನ’ ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ‘ಹರಿ’ ಪಾತ್ರದಲ್ಲಿ ನಟ ರಿಷಬ್‌ ಶೆಟ್ಟಿ, ‘ಶಿವ’ ಎಂಬ ಪಾತ್ರದಲ್ಲಿ ರಾಜ್‌ ಪ್ರೇಕ್ಷಕರನ್ನು ಕರಾವಳಿಯ ರೌಡಿಸಂ ಲೋಕಕ್ಕೆ ಕರೆದೊಯ್ದಿದ್ದ ಈ ಸಿನಿಮಾ ಸಂಕ್ರಾಂತಿ ಹಬ್ಬಕ್ಕೆ ಜೀ5ನಲ್ಲಿ ಚಿತ್ರ ಬಿಡುಗಡೆಯಾಗಿತ್ತು.

ಜನವರಿ 13ರಂದು ಒಟಿಟಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ರಿಲೀಸ್​ ಆಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಕೇವಲ ಮೂರು ದಿನಗಳಲ್ಲಿ ಬರೋಬ್ಬರಿ 8 ಕೋಟಿ ನಿಮಿಷ ವೀಕ್ಷಣೆ ಕಂಡಿದೆ. ಕ್ರೇಜಿಸ್ಟಾರ್‌ ರವಿಚಂದ್ರ ವಿ. ನಟನೆಯ ‘ಕನ್ನಡಿಗ’, ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ನಟನೆಯ ‘ಭಜರಂಗಿ–2’ ಸಿನಿಮಾ, ಸಂಚಾರಿ ವಿಜಯ್ ನಟನೆಯ ಪುಕ್ಸಟ್ಟೆ ಲೈಫ್ ಸಿನಿಮಾ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದ್ದು, ಈ ಲಿಸ್ಟ್ ಗೆ ಈಗ ‘ಗರುಡ ಗಮನ ವೃಷಭ ವಾಹನ’ ಸೇರ್ಪಡೆಯಾಗಿದೆ.

cinibeat