‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ – ಕಾಮಿಡಿ ಕಿಲಾಡಿಗಳ ಸಂಗಮ

 ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ – ಕಾಮಿಡಿ ಕಿಲಾಡಿಗಳ ಸಂಗಮ

ಅಪ್ಸರ ಮೂವೀಸ್ ಲಾಂಛನದಲ್ಲಿ ವೇಂಪಲ್ಲಿ ಬಾವಾಜಿ ಅವರ ನಿರ್ದೇಶನದಲ್ಲಿ ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ಎಂಬ ಹಾಸ್ಯ ಪ್ರಧಾನ ಕಥಾಹಂದರ ಹೊಂದಿದ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ‌. ಈ ಹಿಂದೆ ಗರ್ಭದಗುಡಿ, 141, ಅಕ್ಕಭಾವ ಬಾಮೈದ, ನೀನೇನಾ, ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಈಗ ಮತ್ತೊಂದು ಅಪ್ಪಟ ಕಾಮಿಡಿ ಚಿತ್ರವನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಬಾವಾಜಿ ಅವರೇ ಬರೆದಿದ್ದಾರೆ.
ಈಗಿನ ಟ್ರೆಂಡ್ ಗೆ ತಕ್ಕಂತೆ ಕಾಮಿಡಿ, ಫ್ಯಾಮಿಲಿ ಎಂಟರ್ ಟೈನರ್, ಕಥಾಹಂದರ ಹೊಂದಿರುವ ಚಿತ್ರ ಇದಾಗಿದ್ದು, ಕುಟುಂಬ ಸಮೇತ ಕುಳಿತು ವೀಕ್ಷಿಸುವಂಥ ಅನ್ ಲಿಮಿಟೆಡ್ ಕಾಮಿಡಿ ಜೊತೆಗೆ ಡಿಫರೆಂಟ್ ಕಾನ್ಸೆಪ್ಟ್ ಇದರಲ್ಲಿದೆ. ಈ ಚಿತ್ರದ ಮಾತಿನ ಭಾಗವನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರದ ಅತ್ತಿಬೆಲೆ ಸುತ್ತಮುತ್ತ ಅಲ್ಲದೇ ಹಾಡುಗಳನ್ನು ಆನೇಕಲ್ ನ ಸುಗ್ಗಿ ರೆಸಾರ್ಟ್ ಹಾಗೂ ಕೋರಮಂಗಲದ ಪಬ್ ವೊಂದರಲ್ಲಿ ಚಿತ್ರೀಕರಣ ನಡೆಸಲಾಗಿದೆ. ಈಗಾಗಲೇ ಚಿತ್ರದ ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.


ಜಗಪ್ಪ, ಸುಶ್ಮಿತ, ಸೀರುಂಡೆ ರಘು, ಗಜೇಂದ್ರ, ಗಜೇಂದ್ರ, ರಾಘವಿ ಸೇರಿದಂತೆ ಗಿಚ್ಚಿ ಗಿಲಿ ಗಿಲಿ, ಮಜಾಭಾರತ, ಕಾಮಿಡಿ ಕಿಲಾಡಿಗಳು, ಕಾರ್ಯಕ್ರಮದ ಅನೇಕ ಕಲಾವಿದರು ಅಲ್ಲದೆ ಯಶಸ್ವಿನಿ, ಚಂದನ, ಶರಣ್ಯರೆಡ್ಡಿ ಮುಂತಾದವರು ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಬಾಲು ಅವರ ಕ್ಯಾಮೆರಾ ವರ್ಕ್, ಅಲೆಕ್ಸ್ ಕಲಾವಿದರ ಸಂಗೀತ, ಅರುಣ ಪ್ರಸಾದ್, ವೇಂಪಲ್ಲಿ ಬಾಲಾಜಿ ಅವರ ಸಾಹಿತ್ಯ, ಗಣೇಶ್, ಸದಾಶಿವ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಸದ್ಯದಲ್ಲೇ ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ಚಿತ್ರವನ್ನು ಪ್ರೇಕ್ಷಕರ ‌ಮುಂದೆ ತರುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ.

cinibeat